ಬೆಂಗಳೂರು: ಹೊಸ ಮಾದರಿಯ ರೂಪಾಂತರಗೊಂಡ ಕೊರೊನಾ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ನಾಳೆ ರಾತ್ರಿಯಿಂದ ರಾತ್ರಿ 11ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಈ ವೇಳೆ ಬಸ್ ಸಂಚರಿಸಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಲ್ಲ. ರಾತ್ರಿ 11 ಗಂಟೆ ನಂತರವೂ ಕೆಎಸ್‌ಆರ್‌ಟಿಸಿ ಬಸ್ ಗಳು ಎಂದಿನಂತೆ ಸಂಚರಿಸಲಿವೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಿ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ನೈಟ್ ಕರ್ಫ್ಯೂ ನಿರ್ಧಾರ ಜಾರಿಗೆ ತಂದಿತ್ತು.



