ರಾಯಚೂರು : ರಾಜ್ಯದ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ ಇಳಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದರು. ಇನ್ಮುಂದೆ ಧಾರ್ಮಿಕ ಆಚರಣೆಗೆ ನಿರ್ಬಂಧವಿಲ್ಲ: ರಾಜ್ಯ ಸರ್ಕಾರ ಆದೇಶ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪಚುನಾವಣೆಗಳಿಗೆ ಜೆಡಿಎಸ್ ಸ್ಪರ್ಧಿಸಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಲ್ಲ ಎಂದು ಹೇಳಿದ್ದಾರೆ. ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸಲು ಸರ್ಕಾರ ಆದೇಶ
2023 ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದೆ. ಪಕ್ಷ ಕಟ್ಟುವುದಕ್ಕಾಗಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.



