Connect with us

Dvgsuddi Kannada | online news portal | Kannada news online

ಕೆಎಎಸ್ ಅಧಿಕಾರಿ ಮೆನೆ ಮೇಲೆ ಎಸಿಬಿ ದಾಳಿ; 10 ಲಕ್ಷ ನಗದು, ದಾಖಲೆ ವಶ    

ಪ್ರಮುಖ ಸುದ್ದಿ

ಕೆಎಎಸ್ ಅಧಿಕಾರಿ ಮೆನೆ ಮೇಲೆ ಎಸಿಬಿ ದಾಳಿ; 10 ಲಕ್ಷ ನಗದು, ದಾಖಲೆ ವಶ    

ಡಿವಿಜಿ ಸುದ್ದಿ, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 10 ಲಕ್ಷ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ದಾಳಿ ನಡೆಸಲಾಗಿದೆ . ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಕುರಿತು ದೂರು ದಾಖಲಾಗಿತ್ತು.

ಪ್ರಸ್ತುತ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಆಡಳಿತ ಅಧಿಕಾರಿ ಆಗಿರುವ ಬಿ. ಸುಧಾ ಅವರ ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿ ಒಂದು ಫ್ಲ್ಯಾಟ್, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಮನೆಯ ಮೇಲೂ ದಾಳಿ ನಡೆಸಲಾಗಿದೆ. ಸದ್ಯ ಎಸಿಬಿ ಅಧಿಕಾರಿಗಳು  ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.  ಬೆಳಗ್ಗೆ 6.30 ರಿಂದ ಶೋಧ ಕಾರ್ಯ ನಡೆಯುತ್ತಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top