ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸತ್ಯಜಿತ್ ಅವರನ್ನು ಬೌರಿಂಗ್ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿತ್ತು. ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಕನ್ನಡದ ನೂರಾರು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿರುವ ಸತ್ಯಜಿತ್, 2018ರ ಬಳಿಕ ಅಭಿನಯದಿಂದ ದೂರ ಸರಿದಿದ್ದರು.