Connect with us

Dvgsuddi Kannada | online news portal | Kannada news online

ಹಿಂಗಾರು ಮೆಕ್ಕೆಜೋಳದಲ್ಲಿ ಸೈನಿಕ ಹುಳುವಿನ ಬಾಧೆ:  ಈ ರೀತಿ ನಿರ್ವಹಣೆ ಮಾಡಿ..!

ಕೃಷಿ ಖುಷಿ

ಹಿಂಗಾರು ಮೆಕ್ಕೆಜೋಳದಲ್ಲಿ ಸೈನಿಕ ಹುಳುವಿನ ಬಾಧೆ:  ಈ ರೀತಿ ನಿರ್ವಹಣೆ ಮಾಡಿ..!

ದಾವಣಗೆರೆ: ಜಿಲ್ಲೆಯಾದ್ಯಂತ ಹಿಂಗಾರಿನ ಮೆಕ್ಕೆಜೋಳ ಬೆಳೆಯಲ್ಲಿ ಸೈನಿಕ (ಲದ್ದಿ) ಹುಳುವಿನ ಬಾಧೆ ಕಾಣಿಸಿಕೊಂಡಿದ್ದು, ಹುಳುಗಳು ಎಲೆಗಳನ್ನು ಕೆರೆದು ತಿನ್ನುವುದರಿಂದ ನೀಳವಾದ, ಚಿಂದಿಯಂತಾದ ರಂಧ್ರಗಳು ಕಾಣಿಸಿಕೊಳ್ಳುತ್ತವೆ. ಎಲೆ ಸುಳಿಯನ್ನು ತಿಂದು ಹಾಳು ಮಾಡುತ್ತವೆ. ಆ ಸುಳಿಯಲ್ಲಿ ತೇವದಿಂದ ಕೂಡಿದ ಕಂದು ಬಣ್ಣದ ಹಿಕ್ಕೆಗಳನ್ನು ಕಾಣಬಹುದಾಗಿದ್ದು, ರೈತರು ಈ ಕೆಳಗಿನಂತೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ನಿರ್ವಹಣಾ ಕ್ರಮಗಳು: ಮೊಟ್ಟೆಗಳ ಗುಂಪು ಹಾಗೂ ಮೊದಲ ಹಂತದ ಮರಿಗಳಿರುವ ಎಲೆಗಳನ್ನು ಕಿತ್ತು ನಾಶಪಡಿಸುವುದು. ಹೊಲದಲ್ಲಿ ಅಲ್ಲಲ್ಲಿ ಕವಲೊಡೆದ ರೆಂಬೆಗಳನ್ನು ನೆಟ್ಟು ಪಕ್ಷಿಗಳನ್ನು ಆಕರ್ಷಿಸುವುದು. ಮೊಟ್ಟೆಗಳ ಪರತಂತ್ರ ಜೀವಿಯಾದ ಟ್ರೈಕೊಗ್ರಾಮ ಪ್ರೀಟಿಯೋಸಂನ್ನು ಎಕರೆಗೆ 50000 ಮೊಟ್ಟೆಗಳಂತೆ ನಿರ್ಧರಿತ ಅಂತರದಲ್ಲಿ ಬಿಡುವುದು. (ಹೆಚ್ಚಿನ ಮಾಹಿತಿಗಾಗಿ, ಸಹಾಯಕ ಕೃಷಿ ನಿರ್ದೇಶಕರು, ದೂರವಾಣಿ ಸಂಖ್ಯೆ- 9742865434 ಅವರನ್ನು ಸಂಪರ್ಕಿಸುವುದು).

ಲದ್ದಿ ಹುಳುವಿನಿಂದ ಶೇ. 10 ರಷ್ಟು ಹಾನಿಯಾಗಿದ್ದಲ್ಲಿ ಶೇ. 5ರ ಬೇವಿನ ಕಷಾಯ (ಅಜಾಡಿರೆಕ್ಟಿನ್ 1500 ಪಿಪಿಎಂ)ವನ್ನು 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು. ಶೇ. 20 ರಷ್ಟು ಹಾನಿಯಾಗಿದ್ದಲ್ಲಿ 0.4 ಗ್ರಾಂ. ಎಮಾಮೆಕ್ಟಿನ್ ಬೆನ್‍ಜೊಯೇಟ್ 5% ಎಸ್.ಜಿ. ಅಥವಾ 0.3 ಮಿ.ಲೀ. ಸ್ಪೈನೊಸಾಡ್ 4 ಎಸ್.ಸಿ. ಅಥವಾ 2 ಗ್ರಾಂ. ಥೈಯೋಡಿಕಾರ್ಬ್‍ನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು. ವಿಷ ತಿಂಡಿ ಬಳಕೆ: 10 ಕೆ.ಜಿ. ಅಕ್ಕಿ ಅಥವಾ ಗೋಧಿ ತೌಡಿಗೆ 1 ಕೆ.ಜಿ. ಬೆಲ್ಲ ಹಾಗೂ ಸ್ವಲ್ಪ ನೀರನ್ನು ಬೆರೆಸಿಟ್ಟು ಮಾರನೇ ದಿನ 100 ಗ್ರಾಂ ಥೈಯೊಡಿಕಾರ್ಬ್ ಕೀಟನಾಶಕವನ್ನು ಮಿಶ್ರ ಮಾಡಿ ಬೆಳೆಯ ಸುಳಿಯಲ್ಲಿ ಉದುರಿಸುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕೃಷಿ ಖುಷಿ

Advertisement

ದಾವಣಗೆರೆ

Advertisement
To Top