ದಾವಣಗೆರೆ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ಹರಿಹರ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಸಹಾಯಧನ ನೀಡಲಾಗುವುದು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹರಿಹರ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ರೈತರಿಗೆ ಶೇ.90 ಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಶೇ.45 ರಷ್ಟು ಸಹಾಯಧನ ಲಭ್ಯವಿದ್ದು, ಸಣ್ಣ ಮತ್ತು ಅತಿಸಣ್ಣ ರೈತರು ಕಡ್ಡಾಯವಾಗಿ ಕಂದಾಯ ಇಲಾಖೆಯಿಂದ ನೀಡುವ ಸಣ್ಣ, ಅತಿಸಣ್ಣ ಹಿಡುವಳಿದಾರರ ದೃಡೀಕರಣ ಪತ್ರ, ಪಹಣಿ, ಆಧಾರ್‍ಕಾರ್ಡ್, ಬ್ಯಾಂಕ್ ವಿವರಗಳೊಂದಿಗೆ ಹರಿಹರದ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.