ಡಿವಿಜಿ ಸುದ್ದಿ, ದಾವಣಗೆರೆ: ತೋಟಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನಲ್ಲಿ ಯಾಂತ್ರೀಕರಣ ಯೋಜನೆಯಡಿ ವಿವಿಧ ತೋಟಗಾರಿಕೆ ಉಪಕರಣಗಳ ಸಹಾಯಧನಕ್ಕಾಗಿ ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅ.12 ಕಡೆಯ ದಿನವಾಗಿದೆ.
ಅರ್ಜಿದಾರರು ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬೆಳೆ ದೃಢೀಕರಣ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಫೋಟೊ, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಫಲಾನುಭವಿಗಳು), ಸಣ್ಣ ಮತ್ತು ಅತಿಸಣ್ಣ ರೈತರ ಪ್ರಮಾಣ ಪತ್ರ ವನ್ನು ಸಲ್ಲಿಸಬೇಕು.
ಈ ಯೋಜನೆಯಡಿ ಗುರಿ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಜೇಷ್ಠತೆ ಆಧಾರದ ಮೇಲೆ ಅರ್ಹ ಅರ್ಜಿಗಳನ್ನು ಸಹಾಯಧನಕ್ಕಾಗಿ ಪರಿಗಣಿಸಲಾಗುವುದು. ಮೊದಲು ಬಂದ ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಲಾಗುವುದು. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ, ರೈತಬಾಂಧವರು ಶೀಘ್ರ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವಸಂತ್ ಕುಮಾರ್ ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ, ಕಸಬಾ ಮೊ.ನಂ: 7892366326. ರವಿ ದಾಳೇರ, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ, ಆನಗೋಡು ಮೊ.ನಂ: 7019819101. ಏಕಾಂತ್, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ, ಮಾಯಕೊಂಡ-1 ಮೊ.ನಂ 7899445111. ಅರುಣ್ ರಾಜ್. ಪಿ. ಎಲ್, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ, ಮಾಯಕೊಂಡ-2 ಮೊ.ನಂ: 8722551293. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್) ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಟಿ.ಆರ್. ಶಶಿಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.