Connect with us

Dvgsuddi Kannada | online news portal | Kannada news online

ರೈತರ ಟ್ರ್ಯಾಕ್ಟರ್ ಗಳಿಗೆ ಡೀಸೆಲ್ ಸಹಾಯ ಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಜ.31 ರಂದು ಸಿಎಂ ಚಾಲನೆ

ಪ್ರಮುಖ ಸುದ್ದಿ

ರೈತರ ಟ್ರ್ಯಾಕ್ಟರ್ ಗಳಿಗೆ ಡೀಸೆಲ್ ಸಹಾಯ ಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಜ.31 ರಂದು ಸಿಎಂ ಚಾಲನೆ

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಸಹ ಚಾಲನೆ ನೀಡಲಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ.

ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ರೈತ ಮಕ್ಕಳಿಗೆ ನೀಡುವ ರೈತನಿಧಿ ವಿದ್ಯಾರ್ಥಿ ವೇತನವನ್ನು ರೈತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡುವರು. ಡಾ.ಎಸ್.ವಿ. ಪಾಟೀಲ ಫೌಂಡೇಶನ್ ಉದ್ಘಾಟಿಸುವರು.

ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಸಾವಯವ ಕೃಷಿ ನೈಸರ್ಗಿಕ ಕೃಷಿ ಕುರಿತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಕೃಷಿ ಯಂತ್ರೋಪಕರಣಗಳ ವಿತರಣೆ ಸಹ ನಡೆಯಲಿದೆ ಎಂದು ಶಿವಯೋಗಿ ಕಳಸದ ತಿಳಿಸಿದರು.

ರೈತ ಶಕ್ತಿ ಯೋಜನೆತಡಿ ಪ್ರತಿ ಎಕರೆಗೆ ರೂ.250 ಗಳಂತೆ ಗರಿಷ್ಠ 5 ಎಕರೆಗೆ ರೂ.1250 ಗಳನ್ನು ರೈತರ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುವುದು. ಈಗಾಗಲೇ ಕಿಸಾನ್ ಸಮ್ಮಾನ್ ಯೋಜನೆಗೆ ಫ್ರುಟ್ಸ್ ವೆಬ್ ಸೈಟ್  ಮೂಲಕ ರೈತರ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕ ತಂತ್ರಾಂಶದ ಮೂಲಕ ಇದನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಕೃಷಿ ಭೂಮಿಯ ವಿಸ್ತೀರ್ಣದ ಆಧಾರದಲ್ಲಿ ರೈತರ ಖಾತೆಗೆ ಸಹಾಯಧನ ವರ್ಗಾವಣೆಯಾಗಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top