Connect with us

Dvgsuddi Kannada | online news portal | Kannada news online

ಕೃಷಿ ಯಂತ್ರೋಪಕರಣ ಖರೀದಿ ರಿಯಾಯಿತಿ ಶೇ. 50 ರಿಂದ 75ಕ್ಕೆ ಏರಿಕೆ

ಪ್ರಮುಖ ಸುದ್ದಿ

ಕೃಷಿ ಯಂತ್ರೋಪಕರಣ ಖರೀದಿ ರಿಯಾಯಿತಿ ಶೇ. 50 ರಿಂದ 75ಕ್ಕೆ ಏರಿಕೆ

ಬೆಂಗಳೂರು:  ಕೃಷಿ ಯಂತ್ರೋಪಕರಣ ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿಯನ್ನು  ಶೇ.50ರಿಂದ 75ಕ್ಕೆ ಏರಿಕೆ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಯಲ್ಲಿ ಹೇಳಿದರು.

ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಈವರೆಗೂ ಶೇ.50ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಇದನ್ನು ಶೇ.75ಕ್ಕೆ ಏರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಮತ್ತೊಂದು ಬಾರಿ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೇಂದ್ರ ಸರ್ಕಾರದಿಂದ ನಮಗೆ ಈ ಬಾರಿ ಹೆಚ್ಚಿನ ಅನುದಾನ ಸಿಕ್ಕಿಲ್ಲ. ರಾಜ್ಯ ಸರ್ಕಾರದ ಅನುದಾನದಲ್ಲೇ ನಾವು ಸಬ್ಸಿಡಿ ಕೊಡುತ್ತಿದ್ದೇವೆ. ಹಣಕಾಸಿನ ಲಭ್ಯತೆ ಮೇಲೆ ನಾವು ಹಂತ ಹಂತವಾಗಿ ಯಂತ್ರೋಪಕರಣಗಳ ಖರೀದಿಗೆ ಹಣ ಮಂಜೂರು ಮಾಡುವುದಾಗಿ ಹೇಳಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top