ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಭದ್ರಾವತಿ ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪೊಲೀಸ್ ಇಲಾಖೆಯ ಕ್ರಿಪ್ರ ಕಾರ್ಯಾಚರಣೆ ಪಡೆ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.30ಕ್ಕೆ ಭದ್ರಾವತಿ ಹೆಲಿಪ್ಯಾಡ್ ಗೆ ಬರುವರು. 12.40ಕ್ಕೆ ಕಾರ್ಯಕ್ರಮ ನಡೆಯುವ ಸ್ಥಳ ತಲುಪುವರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಮೈದಾನ 50 ಎಕರೆ ಇದ್ದು, ಈ ಘಟಕ ಕರ್ನಾಟಕದ ಎಲ್ಲಾ ಜಿಲ್ಲೆ ಜೊತೆ ದಕ್ಷಿಣ ರಾಜ್ಯಗಳ 39 ಜಿಲ್ಲೆಯನ್ನು ಒಳಗೊಂಡಿದೆ.