ದಾವಣಗೆರೆ: ಕೇಂದ್ರದ ಗೃಹ ಸಚಿವ ಅಮಿತ್ ಶಾ ನಗರದ ಜಿಎಂಐಟಿ ಕ್ಯಾಂಪಸ್ ಗೆ ಬಂದಿದ್ದು, ಜಿಎಂಐಟಿ ಕ್ಯಾಂಪಸ್ ನಿಂದಲೇ ಜಿಲ್ಲೆಯ ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಆಗಮಿಸಿದ ಅಮಿತ್ ಶಾ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಆನಂದ್ ಸಿಂಗ್, ಮುರುಗೇಶ್ ನಿರಾಣಿ ಸ್ವಾಗತಿಸಿದರು. ಜಿಎಂಐಟಿ ಕ್ಯಾಂಪಸ್ ನಿಂದಲೇ ಗಾಂಧಿಭವನ, ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಸಂಸದ ಜಿ. ಎಂ. ಸಿದ್ದೇಶ್ವರ್, ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಮಹಾನಗರ ಪಾಲಿಕೆಯ ಮೇಯರ್ ಎಸ್. ಟಿ. ವೀರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮತ್ತಿತರರು ಹಾಜರಿದ್ದರು.