ಅಮರಾವತಿ: ಕಲ್ಲು ಕ್ವಾರಿಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಜಿಲೆಟಿನ್ ಕಡ್ಡಿ ಸ್ಪೋಟಗೊಂಡ ಹಿನ್ನೆಲೆ 10 ಜನ ಮೃತಪಟ್ಟಿರುವ ಘಟನೆ ಆಂಧ್ರದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಮೃತರೆಲ್ಲರೂ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವ ಗಣಿ ಕಾರ್ಮಿಕರಾಗಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 12 ಜನ ಗಾಯಗೊಂಡಿದ್ದಾರೆ. ಸ್ಪೋಟಿಸಲು ತಂದಿದ್ದ ಜಿಲೆಟಿನ್ ಕಡ್ಡಿ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.