ದಾವಣಗೆರೆ: ದಾವಣಗೆರೆ ತಾಲ್ಲೂಕು ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರು-02 ಹಾಗೂ ಸಹಾಯಕಿಯರ 35 ಹುದ್ದೆಗಳಿಗೆ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರು 18 ರಿಂದ 35 ವರ್ಷದೊಳಗಿನ ವಯೋಮಾನದೊಳಗಿನ ಸಾಮಾನ್ಯ ವರ್ಗದವರು ಮತ್ತು ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ ವಯೋಮಾನದವರಾಗಿರಬೇಕು. ವಿಕಲಚೇತನ ವರ್ಗಕ್ಕೆ ಸಂಬಂಧಿಸಿದಂತೆ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವವರು 2022 ರ ಜನವರಿ 18 ರ ಸಂಜೆ 5.30 ಗಂಟೆಯೊಳಗೆ ಆನ್‍ಲೈನ್ http://davanagere.nic.in/ ಅರ್ಜಿ ಸಲ್ಲಿಸಬೇಕೆಂದು ದಾವಣಗೆರೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



