Connect with us

Dvgsuddi Kannada | online news portal | Kannada news online

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ; 32 ಸಾವಿರ ಮಾಸಿಕ ವೇತನ

ಪ್ರಮುಖ ಸುದ್ದಿ

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ; 32 ಸಾವಿರ ಮಾಸಿಕ ವೇತನ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿರುವ  19 ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉದ್ಯೋಗ ಅವಕಾಶಗಳಿವೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 29 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇನ್ನು ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಅಂದರೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಶೈಕ್ಷಣಿಕ ಅರ್ಹತೆ:KFD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರಬೇಕು. ಇದರ ಹೊರತಾಗಿ ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿಲ್ಲ. ವಯೋಮಿತಿ: ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು.ವಯೋಮಿತಿ ಸಡಿಲಿಕೆ: 2A, 2B, 3A, 3B, OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ SC, ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ.

ವೇತನ:ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 18600 ರಿಂದ 32600/- ರೂ. ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 29, 2023. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್: aranya.gov.in ಗೆ ಭೇಟಿ ನೀಡಿ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top