Connect with us

Dvgsuddi Kannada | online news portal | Kannada news online

ಇನ್ಮುಂದೆ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರ; ಜಾತಿ ಮತ್ತು ಆದಾಯಪ್ರಮಾಣ ಪತ್ರ ಸೇರಿ 44 ಸೇವೆ ಲಭ್ಯ; ದರ ಪಟ್ಟಿ ಪ್ರಕಟಿಸಿ ಸರ್ಕಾರ ಸುತ್ತೋಲೆ

IMG 20231102 145508

ಪ್ರಮುಖ ಸುದ್ದಿ

ಇನ್ಮುಂದೆ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರ; ಜಾತಿ ಮತ್ತು ಆದಾಯಪ್ರಮಾಣ ಪತ್ರ ಸೇರಿ 44 ಸೇವೆ ಲಭ್ಯ; ದರ ಪಟ್ಟಿ ಪ್ರಕಟಿಸಿ ಸರ್ಕಾರ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ಸರ್ಕಾರ ಸುತ್ತೋಲೆ ಮೂಲಕ ಆದೇಶ ಹೊರಡಿಸಿದೆ. ಇದರ ಜೊತೆಗೆ ಅರ್ಜಿ ಶುಲ್ಕವನ್ನು ಸರ್ಕಾರ ನಿಗದಿಪಡಿಸಿದೆ. ಸಣ್ಣ ಸಣ್ಣ ಕೆಲಸಕ್ಕೂ ತಾಲ್ಲೂಕ್ ಕೇಂದ್ರಕ್ಕೆ ಅಲೆದಾಟ ತಪ್ಪಿಸಲು ಸರ್ಕಾರ, ಗ್ರಾಮ ಪಂಚಾಯತಿಗಳಲ್ಲಿಯೇ ನಾಡಕಚೇರಿ ಸೇವೆ ನೀಡಲು ಆದೇಶಿಸಿದೆ.

ಕಂದಾಯ ಇಲಾಖೆಯ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಡಿ ನಾಡಕಛೇರಿಗಳಲ್ಲಿ ಒದಗಿಸಲಾಗುತ್ತಿರುವ 44 ಸೇವೆಗಳನ್ನು ಪಡೆಯಲು ಸಲ್ಲಿಸಲು ಜನರು ಹೋಬಳಿ ಮಟ್ಟದಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರ/ನಾಡಕಛೇರಿಗಳಿಗೆ ಭೇಟಿ ನೀಡಬೇಕಾಗಿರುತ್ತದೆ. ಪ್ರತಿಯೊಂದು ಹೋಬಳಿಯಲ್ಲಿ ಆರರಿಂದ ಏಳು ಗ್ರಾಮ ಪಂಚಾಯತಿಗಳನ್ನು ಹೊಂದಿರುತ್ತದೆ.

ಈ ಎಲ್ಲಾ ಗ್ರಾಮ ಪಂಚಾಯತಿಯ ಸುಮಾರು 20-50 ಸಾವಿರ ಜನರು, ಸರ್ಕಾರಿ ಸೇವೆಗಳನ್ನು ಹೋಬಳಿ ಮಟ್ಟದಲ್ಲೇ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ ತ್ವರಿತ ಗತಿಯಲ್ಲಿ ಸೇವೆಯನ್ನು ಒದಗಿಸುವುದಕ್ಕೆ ತೊಡಕಾಗುತ್ತಿತ್ತು. ಜೊತೆಗೆ ಸಾರ್ವಜನಿಕರು ಸೇವೆಗಳನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿತ್ತು.

ಈ ಸಮಸ್ಯೆಗೆ ಪರಿಹಾರವಾಗಿ, ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಡಿ ಬರುವ “ಆದಾಯ ಪ್ರಮಾಣ ಪತ್ರ”, “ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ’ಗಳಂತಹ ಪ್ರಮುಖ ಸೇವೆಗಳನ್ನು ಮತ್ತಷ್ಟು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಯಲ್ಲೇ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲು ಸರ್ಕಾರವು ನಿರ್ಧರಿಸಿದೆ.

ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಅಂದಾಜು 3.7 ಕೋಟಿ ಜನರಿಗೆ ಅಂದರೆ 78 ಲಕ್ಷ ಕುಟುಂಬಗಳು ಆಟಲ್ ಜೀ ಜನಸ್ನೇಹಿ (ನಾಡಕಛೇರಿ) ಸೇವೆಗಳನ್ನು ಪಡೆಯುವಲ್ಲಿ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳು ಮಹತದ ಪಾತ್ರವಹಿಸಲಿವೆ.

ಆದುದರಿಂದ, ಪಂಚತಂತ್ರ 2.0 ತಂತ್ರಾಂಶವನ್ನು ನಾಡಕಛೇರಿ ತಂತ್ರಾಂಶದೊಂದಿಗೆ ಸಂಯೋಜನೆ ಮಾಡಲಾಗಿದೆ. ಸಾರ್ವಜನಿಕರು ಇನ್ನೂ ಮುಂದೆ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಡಿ ಬರುವ “ಆದಾಯ ಪ್ರಮಾಣ ಪತ್ರ”, “ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ” ಗಳಂತ ಪ್ರಮುಖ ಸೇವೆಗಳನ್ನು ಮತ್ತು ಇನ್ನೂ ಮುಂತಾದ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಅರ್ಜಿ ಸಲ್ಲಿಸಿ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸದರಿ ಸೇವೆಗಳನ್ನು ಪಡೆಯಬಹುದಾಗಿದೆ.

ಅದರಂತೆ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಿ, ಉಲ್ಲೇಖಿತ ಆದೇಶರಂತೆ, ಅನುಬಂಧ-1 ರಲ್ಲಿ ತಿಳಿಸಲಾಗಿರುವ ಅರ್ಜಿ ಶುಲ್ಕವನ್ನು ಪಡೆಯಲು ಆದೇಶಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top