ದಾವಣಗೆರೆ: ಮಾದರಿ ವೃತ್ತಿ ಕೇಂದ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ವಿವಿಧ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಪಿ.ಓ(ಪ್ರೋಬೇಷನರಿ ಆಫೀಸರ್) ಮತ್ತು ಕ್ಲರ್ಕ್(ಸಹಾಯಕ) ಹುದ್ದೆಗಳಿಗೆ ಐ.ಬಿ.ಪಿ.ಎಸ್. ನಿಂದ 2022ನೇ ಆಗಸ್ಟ್ ಹಾಗೂ ಮುಂಬರುವ ತಿಂಗಳುಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಆಗಸ್ಟ್ 18 ರಿಂದ ಆಗಷ್ಟ್ 30 ರವರೆಗೆ ಉಚಿತ ತರಬೇತಿ ಆಯೋಜಿಸಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ “ಉಚಿತ ಪರೀಕ್ಷಾ ಪೂರ್ವ ತರಬೇತಿ”ಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಆ.18 ರ ಬೆಳಿಗ್ಗೆ 11 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ (ಪ್ರಯಾಣ ಭತ್ಯೆ ಹಾಗೂ ಊಟದ ವ್ಯವಸ್ಥೆ ಇರುವುದಿಲ್ಲ) ತರಬೇತಿಗೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08192-259446 ಹಾಗೂ ಮೊಬೈಲ್ ಸಂಖ್ಯೆ 7406323294 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



