Connect with us

Dvgsuddi Kannada | online news portal | Kannada news online

ಬಿಇಎಲ್ ನಲ್ಲಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಬಿಇಎಲ್ ನಲ್ಲಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)  ನಲ್ಲಿ 50 ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆ ಭರ್ತಿಗೆ  ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ನವೆಂಬರ್​​ 23 ಕೊನೆಯ ದಿನವಾಗಿದೆ.

ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.  ಡಿಸೆಂಬರ್ 31,2020ರ ಅನ್ವಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ವೇತನ: ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,110 ರೂಪಾಯಿ ಸ್ಟೈಫೆಂಡ್ ನೀಡಲಾಗುವುದು.

ಮೆರಿಟ್ ಆಧಾರದ ಮೇಲೆ ಮತ್ತು ಬಿ.ಇ/ಬಿ.ಟೆಕ್ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಯಾವುದೇ ಅರ್ಜಿ ಶುಲ್ಕ ಪಾವತಿಸದೆ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಅಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನಂತರ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});