ಬಳ್ಳಾರಿ : ಗಣಿನಾಡು ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಲಭಿಸಿದೆ. ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್ ಗಳಲ್ಲಿ ಕಾಂಗ್ರೆಸ್ 21 ಸ್ಥಾನ ಗೆಲ್ಲುವ ಮೂಲ ಬಹುಮತ ಪಡೆದಿದೆ. ಬಿಜೆಪಿ 13 ಸ್ಥಾನಗಳನ್ನು ಪಡೆದುಕೊಂಡಿದ್ದು, ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ. ಬಳ್ಳಾರಿ ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಳಗ್ಗೆ ಮತ ಎಣಿಕೆ ನಡೆಯುತ್ತಿದೆ. ಈಗಾಗಲೇ ಎಲ್ಲ ವಾರ್ಡ್ ಎಣಿಕೆ ಕಾರ್ಯ ಮುಗಿದಿದ್ದು, ಅಧಿಕೃತವಾಗಿ ಘೋಷಣೆಯಷ್ಟೇ ಬಾಕಿ ಇದೆ. ಸಚಿವ ಬಿ.ಶ್ರೀರಾಮುಲು, ಶಾಸಕ ಜಿ.ಸೋಮಶೇಖರ ರೆಡ್ಡಿ ಭರ್ಜರಿ ಪ್ರಚಾರ ಮಾಡಿದ್ದರೂ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಸಾದ್ಯವಾಗಿಲ್ಲ.



