ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ನವೀನ್ ಗೆ ಹೈಕೋರ್ಟ್ ಜಾಮೀನು ನೀಡಿದೆ. ನವೀನನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ, ಗಲಭೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಬಂಧಿಸಲಾಗಿತ್ತು.
ಹೈ ಕೋರ್ಟ್ ನ ೇಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದ್ದು, ಆರೋಪಿಯ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕೆ ಜಾಮೀನು ನೀಡದಿರಲು ಸಾಧ್ಯವಿಲ್ಲ. ಬಂಧನದಲ್ಲಿರುಸುವುದು ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ.ಎ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವೀನ್ ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಸಂಬಂಧಿಯಾಗಿದ್ದಾನೆ.
ನವೀನ್ ಮೆಸೇಜ್ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿರೋದಾಗಿ ಒಪ್ಪಿಕೊಂಡಿದ್ದಾರೆ. ರಾಜಕೀಯವಾಗಿ ಕಕ್ಷಿದಾರರನ್ನ ಟಾರ್ಗೆಟ್ ಮಾಡಲಾಗಿದೆ ಎಂದು ನವೀನ್ ಪರ ವಕೀಲರು ವಾದ ಮಂಡಿಸಿದ್ದರು. ನವೀನ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67, ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನವೀನ್ , ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿಯಾಗಿದ್ದ. ಫೇಸ್‍ಬುಕ್ ಪೋಸ್ಟ್ ನಲ್ಲಿ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಬರೆದುಕೊಂಡಿದ್ದರಿಂದ ಉದ್ರಿಕ್ತಗೊಂಡ ಗುಂಪು ಕಾವಲಬೈರಸಂದ್ರದಲ್ಲಿರುವ ಶಾಸಕರ ಮನೆಯ ಸೇರಿದಂತೆ ಡಿಜೆಹಳ್ಳಿ, ಕೆಜೆಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟಿದ್ದರು.



