ಡಿವಿಜಿ ಸುದ್ದಿ, ದಾವಣಗೆರೆ: ಬೆಂಗಳೂರಿನ ಹಿಂದುಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್) ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಎಸ್.ಎಸ್.ಎಲ್.ಸಿ.ಯಲ್ಲಿ ಶೇ.60, ಎಸ್.ಸಿ. ಎಸ್.ಟಿ. ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕದೊಂದಿಗೆ ಪಾಸಾಗಿರಬೇಕು ಹಾಗೂ 15 ರಿಂದ 18 ವರ್ಷ ವಯೋಮಾನದಾವರಾಗಿರಬೇಕು.
ನಿಗದಿತ ಅರ್ಜಿ ನಮೂನೆಯನ್ನು ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ, ಬಿ.ಪಿ.ಎಲ್./ಅಂತ್ಯೋದಯ ರೇಷನ್‍ಕಾರ್ಡ್, ಜಾತಿ ಪ್ರಮಾಣ ಪತ್ರ, ಹಾಗೂ ಆಧಾರ್ ಕಾರ್ಡ್ ಇವುಗಳ ಪ್ರತಿಗಳನ್ನು (ಜೆರಾಕ್ಸ್) ಲಗತ್ತಿಸಬೇಕ.
ಅರ್ಜಿಗೆ 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ, ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ 35, 1ನೇ ಮಹಡಿ, ದಾವಣಗೆರೆ. ಇಲ್ಲಿಗೆ ನ.07 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ದೂ.ಸಂ: 08192-259446 ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.