ಭದ್ರಾವತಿ: ಕಳೆದ ಒಂದು ವಾರದಿಂದ ಭದ್ರಾ ಜಲಾಶಯ ಪ್ರದೇಶದಲ್ಲಿ ನಿರಂತರ ಮಳೆಯಿಂದ ಒಳ ಹರಿವು ಹೆಚ್ಚಳವಾಗಿದೆ. ಒಂದೇ ದಿನ ಮೂರು ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಮಟ್ಟ 166.4 ಅಡಿಗೆ ಏರಿಕೆಯಾಗಿದೆ. ನಿನ್ನೆ (ಜು.07) 31,667 ಕ್ಯೂಸೆಕ್ ಒಳ ಹರಿವು ಇತ್ತು. ಇಂದು (ಜು.08) 29,942 ಕ್ಯೂಸೆಕ್ ಒಳ ಹರಿವಿದೆ. ಇಂದು ಬೆಳಗ್ಗೆ ವೇಳೆಗೆ ನೀರಿನ ಮಟ್ಟ 166.4 ಅಡಿಗೆ ತಲುಪಿದೆ. ನಿನ್ನೆ (ಜು.7) 163.9 ಅಡಿ ಇತ್ತು.
- ನೀರಿನ ಸಂಗ್ರಹದ ವಿವರ
- ಇಂದಿನ ನೀರಿನ ಮಟ್ಟ 166.4 ಅಡಿ
- ಪೂರ್ಣ ಮಟ್ಟ:186 ಅಡಿ
- ಇಂದಿನ ಸಾಮರ್ಥ್ಯ: 49.074 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳಹರಿವು: 29,942 ಕ್ಯೂಸೆಕ್
- ಒಟ್ಟು ಹೊರಹರಿವು: 143 ಕ್ಯೂಸೆಕ್
- ಬಲದಂಡೆ ನಾಲೆ: 0.00 ಕ್ಯೂಸೆಕ್ಸ್
- ಎಡದಂಡೆ ನಾಲೆ: 0.00ಕ್ಯೂಸೆಕ್ಸ್
- ಕಳೆದ ವರ್ಷ ಈ ದಿನ : 155.8 ಅಡಿ