ಡಿವಿಜಿ ಸುದ್ದಿ, ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಶಿರಾದಿಂದ ಇತ್ತೀಚೆಗೆ ಬಿಜೆಪಿ ಸೇರಿದ ರಾಜೇಶ್ ಗೌಡ ಹಾಗೂ ಆರ್ ಆರ್ ನಗರದಿಂದ ಮುನಿರತ್ನಗೆ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದೆ.
ಆರ್ ಆರ್ ನಗರದಲ್ಲಿ ನಕಲಿ ಮತದಾನ ನಡೆದಿದೆ ಎಂದು ಚುನಾವಣೆ ಮುಂದೂಡುವಂತೆ ತುಳುಸಿ ಮುನಿರಾಜು ಗೌಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ತೀರ್ಪು ಇಂದು ಪ್ರಕಟವಾಗಿದ್ದು, ಆರ್ ಆರ್ ನಗರ ಚುನಾವಣೆಗೆ ತಡೆ ನೀಡಲ್ಲ. ನಿಗದಿತ ದಿನಾಂಕವೇ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಸುಪ್ರೀಂ ಆದೇಶಕ್ಕಾಗಿ ಕಾಯುತ್ತಿದ್ದ ಬಿಜೆಪಿ ಈಗ ಅಧಿಕೃತವಾಗಿ ಎರಡು ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಶಿರಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಆರ್ ಆರ್ ನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ ಕಣಕ್ಕೆ ಇಳಿದ್ದಾರೆ.



