ದಾವಣಗೆರೆ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇಯ ವರ್ಷದ ಪುಸ್ತಕ ಬಹುಮಾನಕ್ಕಾಗಿ ಅತ್ಯುತ್ತಮ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.2022ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣಬರಹ, ಅನುವಾದ-1 ಮತ್ತು 2, ಲೇಖಕತ ಮೊದಲ ಸ್ವತಂತ್ರಕೃತಿ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಫೆಬ್ರವರಿ 20 ರೊಳಗಾಗಿ ಸಲ್ಲಿಸುವುದು.
ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತಿಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ದೂ.ಸಂ.: 080-22211730/22106460 ಗಳನ್ನು ಸಂಪರ್ಕಿಸುವುದು.



