ಶಿವಮೊಗ್ಗ: ಬಿಪಿಎಲ್ ಕಾರ್ಡ್ ಗೆ ಹೊಸ ನಿಯಮ ಜಾರಿ ಇಲ್ಲ. 2017 ರ ಮಾನದಂಡವೇ ಮುಂದುವರೆಯುತ್ತದೆ. ಕೆಲವು ಶ್ರೀಮಂತರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅಂಥವರು ಬಿಪಿಎಲ್ ಕಾರ್ಡ್ ವಾಪಾಸ್ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು. ಅನಗತ್ಯ ಬಿಪಿಎಲ್ ಕಾರ್ಡ್ ಗಳನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ. ಅಕ್ರಮ ಕಂಡು ಬಂದಲ್ಲಿ ಕಾನೂನು ರೀತಿ ಕ್ರಮಕ್ಕೆ ಹೇಳಿದ್ದೇನೆ ಎಂದರು.
ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ಸಿಎಂ, ಕಾನೂನು ರೀತಿ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತೇನೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಸಮಾಧಾನ ತರುವ ರೀತಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇನೆ ಎಂದರು.