Connect with us

Dvgsuddi Kannada | online news portal | Kannada news online

ಭಾರತೀಯ ಪಶುಪಾಲನ್ ನಿಗಮದಲ್ಲಿ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಭಾರತೀಯ ಪಶುಪಾಲನ್ ನಿಗಮದಲ್ಲಿ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಪಶುಪಾಲನ್ ನಿಗಮದಲ್ಲಿ ಖಾಲಿ ಇರುವ  747 ವಿವಿಧ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು .

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.  ಏಪ್ರಿಲ್ 20,2022 ರಿಂದ ಮೇ 10,2022ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, 12ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಂಪೂರ್ಣ ಮಾಹಿತಿಗೆ ವೆಬ್ ಸೈಟ್ https://bharatiyapashupalan.com/ ಗೆ ಭೇಟಿ ನೀಡಿ.

ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆನ್‌ಲೈನ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.  ಸ್ಥಳೀಯ ವ್ಯವಸ್ಥಾಪಕ ಹುದ್ದೆಗಳಿಗೆ 944/-ರೂ, ಜಿಲ್ಲಾ ವ್ಯವಸ್ಥಾಪಕ ಹುದ್ದೆಗಳಿಗೆ 826/-ರೂ, ಟೆಹ್ಸಿಲ್ ವ್ಯವಸ್ಥಾಪಕ ಹುದ್ದೆಗಳಿಗೆ 708/-ರೂ, ಎಕ್ಸಿಕ್ಯುಟಿವ್ ಮ್ಯಾನೇಜರ್ ಹುದ್ದೆಗಳಿಗೆ 826/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆನ್‌ಲೈನ್‌  ಮೂಲಕ ಅಧಿಕೃತ ವೆಬ್‌ಸೈಟ್ https://bharatiyapashupalan.com/ ಗೆ ಭೇಟಿ ನೀಡಿ. ಸೂಕ್ತ ಮಾಹಿತಿ, ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಏಪ್ರಿಲ್ 20,2022 ರಿಂದ ಮೇ 10,2022ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top