Connect with us

Dvgsuddi Kannada | online news portal | Kannada news online

ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿನ (BSF) ಕಾನ್ಸ್‌ಟೇಬಲ್ ಮತ್ತು ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 26 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ rectt.bsf.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಕಾನ್ಸ್‌ಟೇಬಲ್- 8 ಹುದ್ದೆ,  ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ)- 18 ಹುದ್ದೆ ಸೇರಿ ಒಟ್ಟು 26 ಹುದ್ದೆ ಭರ್ತಿ ನಡೆಯಲಿದೆ.  BSF ಹೆಡ್ ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೆಯೇ ಪಶುವೈದ್ಯಕೀಯ ಸ್ಟಾಕ್ ಅಸಿಸ್ಟೆಂಟ್‌ನಲ್ಲಿ ಒಂದು ವರ್ಷದ ಕೋರ್ಸ್ ಮಾಡಿರಬೇಕು. ಅಭ್ಯರ್ಥಿಗಳು ಕನಿಷ್ಠ 1 ವರ್ಷದ ಅನುಭವವನ್ನು ಹೊಂದಿರಬೇಕು. ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸರ್ಕಾರಿ ಪಶುವೈದ್ಯಕೀಯ ಆಸ್ಪತ್ರೆ / ಡಿಸ್ಪೆನ್ಸರಿ / ಪಶುವೈದ್ಯಕೀಯ ಕಾಲೇಜು / ಸರ್ಕಾರಿ ಫಾರ್ಮ್‌ನಿಂದ ಕನಿಷ್ಠ 2 ವರ್ಷಗಳ ಪ್ರಾಣಿ ನಿರ್ವಹಣೆ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ.100/, SC / ST / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ.  ಈ ಹುದ್ದೆಗಳಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 6, 2023 ಕೊನೆಯ ದಿನವಾಗಿದೆ.  ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: 18 ರಿಂದ 25 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.  ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top