Connect with us

Dvgsuddi Kannada | online news portal | Kannada news online

ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

bsf

ಪ್ರಮುಖ ಸುದ್ದಿ

ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಸಹಾಯಕ ಕಮಾಂಡೆಂಟ್ (ವೆಟರ್ನರಿ ಅಸಿಸ್ಟೆಂಟ್ ಸರ್ಜನ್) ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಸಹಾಯಕ ಕಮಾಂಡೆಂಟ್ (ವೆಟರ್ನರಿ ಅಸಿಸ್ಟೆಂಟ್ ಸರ್ಜನ್)- 20 ಹುದ್ದೆಗಳಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ ಮಾಡಿರಬೇಕು. 23 ರಿಂದ 30 ವರ್ಷಗಳ ನಡುವೆ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ. 100 ಹಾಗೂ ST/ST/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 56,100 ರಿಂದ 1,77,500 ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 9, 2023 ಹ ಆರಂಭವಾಗಿದ್ದು, ಜ.28 ವರೆಗೆ ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top