ಡಿವಿಜಿ ಸುದ್ದಿ, ಬೆಂಗಳೂರು : ನವೆಂಬರ್ 3ರಂದು ನಡೆದ ರಾಜರಾಜೇಶ್ವರಿನಗರ ಉಪ ಚುನಾವಣೆಯ ಮತಏಣಿಕೆ ಕಾರ್ಯ ಇಂದು ನಡೆಯುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 11ನೇ ಸುತ್ತಿನಲ್ಲಿಯೂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 27 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿರುವ ಮುನಿರತ್ನ ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ.
ಚುನಾವಣೆ ಪ್ರಚಾರ ವೇಳೆ ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಉಂಟಾಗಿತ್ತು. ಬಿಜೆಪಿಯ ಅಭ್ಯರ್ಥಿ ಮತಏಣಿಕೆ ಆರಂಭವಾದಾಗಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡು ಬಂದಿದ್ದಾರೆ. ಇದೀಗ 11ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ 55,102 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಕುಸುಮಾ 28,046 ಮತಗಳನ್ನು ಪಡೆದಿದ್ದರೇ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 1,856 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಮುನಿರತ್ನ 27,056 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.