Connect with us

Dvgsuddi Kannada | online news portal | Kannada news online

ಯಡಿಯೂರಪ್ಪ ಮಾತು ತಪ್ಪಿದ ನಾಯಕ: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಪ್ರಮುಖ ಸುದ್ದಿ

ಯಡಿಯೂರಪ್ಪ ಮಾತು ತಪ್ಪಿದ ನಾಯಕ: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಬೆಂಗಳೂರು: ಯಡಿಯೂರಪ್ಪ ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ. ತಾವು ಕೊಟ್ಟಿದ್ದ ಮಾತು ಕಳೆದುಕೊಂಡಿದ್ದಾರೆ. ಅವರು ನೆನಪು ಮಾಡಿಕೊಳ್ಳಬೇಕು, ಯಾರಿಂದ ಸರ್ಕಾರ ಬಂತು ಅಂತ. 17 ಜನರ ಭಿಕ್ಷೆಯಲ್ಲಿ ಸರ್ಕಾರ ಇದೆ. ಅವರ ತ್ಯಾಗದಿಂದ ಸರ್ಕಾರ ಬಂದಿದ ಅದನ್ನ ನೆನಪು ಮಾಡಿಕೊಳ್ಳಿ ಎಂದು ಸಚಿವ ಸ್ಥಾನ ವಂಚಿತ  ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ನಾಯಕನಿಗೂ ಕೃತಜ್ಞತೆ ಇಲ್ಲ. ಸಿದ್ದರಾಮಯ್ಯ ಕರೆದುಕೊಂಡು ಬಂದ್ವಿ ಅವರು ಹೇಳಲಿಲ್ಲ. ಯಡಿಯೂರಪ್ಪಗೆ ತ್ಯಾಗ ಮಾಡಿದ್ವಿ ಅವರು ಹೇಳಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

yeddiyurapp dvgsuddi

ಯಡಿಯೂರಪ್ಪನವರೇ ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡೋಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನ ಸಿದ್ಧಲಿಂಗೇಶ್ವರನು ಕ್ಷಮಿಸೋಲ್ಲ. ನೀವು ಎಂತಹ ಸರ್ಕಾರ ಮಾಡಿದ್ದೀರಿ ಯಡಿಯೂರಪ್ಪನವರೇ(?) 33ರಲ್ಲೂ 13 ವೀರಶೈವ, 11 ಜನ ಒಕ್ಕಲಿಗ, 4 ಜನ ಕುರುಬರಿಗೆ ಮಂತ್ರಿ ಕೊಟ್ಟಿದ್ದೀರಾ(?) ಇದೇನಾ ನಿಮ್ಮ ಸಾಮಾಜಿಕ ನ್ಯಾಯ ಎಂದು ಪ್ರಶ್ನೆ ಮಾಡಿದರು.

ನಾಗೇಶ್​ ಅವರನ್ನು ಯಾಕೇ ತೆಗಿಬೇಕು. ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಕೊಡ್ತೀರಾ ಹೇಳಿ. ಕೋರ್ಟ್​ಗೂ ನನಗೆ ಮಂತ್ರಿ ಸ್ಥಾನ ಕೊಡೋದಕ್ಕೂ ಸಂಬಂಧ ಇಲ್ಲ. ಆ ಸೈನಿಕನ ಮೇಲೆ 420 ಕೇಸ್ ಇದೆ. ಅವನಿಗೆ ಸಚಿವನನ್ನಾಗಿ ಮಾಡೋಕೆ ದುಂಬಾಲು ಬಿದ್ದಿದ್ದೀರಾ(?) ಯಾಕೇ ಎಲ್ಲಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಹೇಳಿ. ಏನಾದರೂ ಬ್ಲಾಕ್ ಮೇಲ್ ಮಾಡ್ತಿದ್ತಾನಾ ಅವನು. ಅವನೇನು ರಾಜೀನಾಮೆ ಕೊಟ್ನಿದ್ನಾ(?) ಅಥವಾ ನೀವೇನು ಸೈನಿಕನ ಕೈಗೊಂಬೆ ಆಗಿದ್ದೀರಾ(?) ನಿಮ್ಮ ಮಾಜಿ ಪಿಎ ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಂಡ್ರಾ ಹೇಳಿ ಎಂದು ಸಿಎಂ ಬಿಎಸ್​ವೈ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಯಡಿಯೂರಪ್ಪನವರೇ ನಿಮ್ಮಿಂದ ಏನಾದ್ರು ನಿರೀಕ್ಷೆ ಮಾಡಿದ್ನಾ ನಾನು. ಸ್ನೇಹದಲ್ಲಿ ಇದ್ದುದ್ದಕ್ಕೆ ನಿಮಗೆ ಸಹಾಯ ಮಾಡಿದ್ವಿ. ಆದರೆ, ನೀವೆನು ಮಾಡಿದ್ರಿ ಹೇಳಿ. ನೀವು ಏನು ಮಾತು ಕೊಟ್ಟಿದ್ರಿ ಅಂತ ಹೇಳಿ. ಬನ್ನಿ ಬೇಕಿದ್ರೆ ಯಡಿಯೂರಿಗೆ ಹೋಗೋಣ ಏನಾಯ್ತು ಅಂತ ಅಲ್ಲೆ ಮಾತನಾಡೋಣ. ನಾವು ಯಡಿಯೂರಪ್ಪರಿಂದ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ನಿಮ್ಮನ್ನ ಸಿಎಂ ಮಾಡಿದ್ದೆ ಈ 17 ಜನ. ನಿಮ್ಮ ಸಂಪುಟದಲ್ಲಿ ಎಲ್ಲರೂ ಇರಬೇಕು. ಮುಸ್ಲಿಂ ಕೂಡ ಇರಬೇಕು. ಎಲ್ಲಾ ಜಾತಿ ಜನಾಂಗ ಇರಬೇಕು. ಆದರೆ, ಇಲ್ಲೆನಾಗಿದೆ(?) ನಾಡಿನಲ್ಲಿ ನಾಲಿಗೆಗೆ ತಪ್ಪದ ನಾಯಕ ಅಂತ ಬಿರುದು ಕೊಟ್ಟಿದ್ದು ನಾವೇ. ಆದರೆ, ಅದೇಲ್ಲ ಏನಾಯ್ತು ಎಂದು ಹೆಚ್​ ವಿಶ್ವನಾಥ್ ಅವರು ಮಾತನಾಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top