ಬೆಂಗಳೂರು: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ರೇಣುಕಾಚಾರ್ಯ, ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿಗೆ ಬಂದಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬರುತ್ತಿದ್ದಂತೆ ಭೇಟಿ ಮಾಡಿ ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವಂತೆ ಮತ್ತೊಮ್ಮೆ ಮನವಿ ಮಾಡಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಧ್ಯೆ ಕರ್ನಾಟಕ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂಬುದು ಜನರ ಮತ್ತು ಪಕ್ಷದ ಕಾರ್ಯಕರ್ತರ ಆಸೆಯಾಗಿತ್ತು. ಆದರೆ, ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ನನ್ನನ್ನು ಪರಿಗಣಿಸಿಲ್ಲ. ಹೀಗಾಗಿ ಸಹಜವಾಗಿ ಅಸಮಾಧಾನವಾಗಿದೆ ಎಂದು ಭಾವುಕರಾದರು.
ನನಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನನ್ನ ಕರ್ತವ್ಯ ನಾನು ಮಾಡಿದ್ದೇನೆ . ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ನನ್ನ ಪರಿಚಯ ಮಾಡಿಕೊಂಡಿದ್ಧೇನೆ. ಅರುಣ್ ಸಿಂಗ್ ಭೇಟಿಯಾಗಿದ್ದು ತುಂಬಾ ಖುಷಿ ಆಯ್ತು. ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದ್ದಾನೆ. ಅವರು ಕೂಡು ವಿಶ್ವಾಸದಿಂದ ಮಾತನಾಡಿ, ಮುಂದೆ ನೋಡೋಣ ಎಂದಿದ್ಧಾರೆ ಎಂದರು.
ಈಗೀರುವ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಯುತ್ತೇನೆ. ಪಕ್ಷ ಸಂಘಟನೆ ಹಾಗೂ ಸರ್ಕಾರಕ್ಕೆ ಸಂಪರ್ಕ ಸೇತುವೆಯಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ತಿಳಿಸಿದರು.



