ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ, ಕಚೇರಿ ಸೇರಿದಂತೆ 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, 50 ಲಕ್ಷ ವಶ ಪಡಿಸಿಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಾಧ್ಯತೆ ಇದೆ.
ಡಿ.ಕೆ ಶಿವಕುಮಾರ್ ಸದಾಶಿವ ನಗರ ನಿವಾಸ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳಿಗಾಗಿ ಸಿಬಿಐ ಶೋಧ ನಡೆಸಲಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು 2019ರ ಸೆಪ್ಟೆಂಬರ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ನಂತರ ಆ ಪ್ರಕರಣದ ಸಿಬಿಐ ತನಿಖೆಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಒಂದು ವರ್ಷದಿಂದ ಸಿಬಿಐ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿರುವ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳಿಗ್ಗೆ ದಿಢೀರ್ 15 ಕಡೆ ದಾಳಿ ಮಾಡಿದ್ದಾರೆ.
ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರ ದೆಹಲಿಯ ಮನೆ ಮೇಲೂ ಸಿಬಿಐ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂದಲ್ಲಿರುವ ನರ್ಮದಾ ಅಪಾರ್ಟ್ ಮೆಂಟ್ ನಲ್ಲಿರುವ ಸಂಸದ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ತಪಾಸಣೆಯಲ್ಲಿ ತೊಡಗಿದ್ದಾರೆ.




