Connect with us

Dvgsuddi Kannada | online news portal | Kannada news online

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಇರುವ 20 ಸಾವಿರ‌ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಇರುವ 20 ಸಾವಿರ‌ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಪರಿಶೋಧನಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಶಾಖಾಧಿಕಾರಿ, ಆದಾಯ ತೆರಿಗೆ, ಅಬಕಾರಿ ನಿರೀಕ್ಷಕರು, ಸಿಬಿಐ, ಎನ್‍ಐಎ, ಎನ್‍ಸಿಬಿ ಯಲ್ಲಿ ಸಬ್- ಇನ್ಸ್‍ಪೆಕ್ಟರ್‍ಗಳು ಮತ್ತು ಕಿರಿಯ ಸಂಖ್ಯಾ ಸಂಗ್ರಹಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ  ವತಿಯಿಂದ (20,000ಕ್ಕೂ ಅಧಿಕ ಹುದ್ದೆಗಳು) ಕಂಬ್ಯೆನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳು ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್ https://ssc.nic.in or www.sskkr.kar.nic.inಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ 18 ರಿಂದ 30ವರ್ಷಗಳು. ಅರ್ಜಿ ಸಲ್ಲಿಸಲು ಅ.08 ಕೊನೆಯ ದಿನಾಂಕ ವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/9483862020 ಅಥವಾ 08192-259446 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top