ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗಿತು.ಜಗಳೂರು ಶಾಸಕ ಎಸ್ ವಿ ರಾಮಚಂದ್ರ ಕಿತ್ತೂರು ರಾಣಿ ಚೆನ್ನಮ್ಮ ಫೋಟೋಗೆ ಪೂಜೆ ಸಲ್ಲಿಸಿ ಜಯಂತಿಗೆ ಚಾಲನೆ ನೀಡಿದರು.
ಪ್ರತಿ ವರ್ಷ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ವಿವಿಧ ವಾದ್ಯಗಳಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಚೆನ್ನಮ್ಮನ ಫೋಟೋವನ್ನು ಮೆರವಣಿಗೆ ಮಾಡುವ ಮೂಲಕ ಅದ್ದೂರಿಯಾಗಿ ಆಚರಿಸಲಾಗುತಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಊರಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರೂ ಹಾಗೂ ಎಲ್ಲಾ ಸಮಾಜದ ಮುಖಂಡರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಉಪಸ್ಥಿತರಿದ್ದರು.