ಚಿಕ್ಕಮಗಳೂರು : ಗಣಪತಿ ವಿಸರ್ಜಿಜನೆ ಮೆರವಣಿಗೆ ಹೊರಟಿದ್ದಾಗ ಭೀಕರ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಿ.ಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ರಾಜು(47), ಪಾರ್ವತಿ(35), ರಚನಾ(28) ಮೃತಪಟ್ಟಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



