Connect with us

Dvgsuddi Kannada | online news portal | Kannada news online

ಚಿತ್ರದುರ್ಗ; ಮೃತ ದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ; ಮೂವರ ಸಾವು

ಪ್ರಮುಖ ಸುದ್ದಿ

ಚಿತ್ರದುರ್ಗ; ಮೃತ ದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ; ಮೂವರ ಸಾವು

ಚಿತ್ರದುರ್ಗ: ಮೃತ ದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು (ಜೂನ್ 08) ಬೆಳಗ್ಗೆ ಈ ಭೀಕರ ಅಪಘಾಟತ ಸಂಭವಿಸಿದೆ. ಆಂಬ್ಯುಲೆನ್ಸ್ ನಲ್ಲಿದ್ದ ತಮಿಳುನಾಡಿನ ತಿರುನಲ್ವೇಲಿಯ ಕನಕಮಣಿ(72), ಆಕಾಶ್ (17) ಮತ್ತು ಅಂಬುಲೆನ್ಸ್ ಚಾಲಕ ಮೃತಪಟ್ಟವರು ಎಂದು ತಿಳಿದು ಬಂದಿದೆ.ಆಂಬ್ಯುಲೆನ್ಸ್ ಗುಜರಾತ್‌ ನಿಂದ ತಮಿಳುನಾಡಿನ ತಿರುನಲ್ವೇಲಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top