ಚಿತ್ರದುರ್ಗ: ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ನಡು ರಸ್ತೆಯಲ್ಲಿಯೇ ಬಸ್ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗೊರ್ಲತ್ತು ಕ್ರಾಸ್ ಬಳಿ ಇಂದು (ಡಿ.25) ಬೆಳಗಿನಜಾವ 3.45ಕ್ಕೆ ನಡೆದಿದೆ. ಈ ಭೀಕರ ಅಪಘಾತದಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಶುಕ್ರವಾರ ಶಾಮನೂರು ಶಿವಶಂಕರಪ್ಪ ಕೈಲಾಸ ಸಮಾರಾಧನೆ; ಸಂಚಾರ ಮಾರ್ಗದಲ್ಲಿ ಬದಲಾವಣೆ
ಲಾರಿ ಡಿಕ್ಕಿಯ ರಭಸಕ್ಕೆ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಬಸ್ ಗೆ ಬೆಂಕಿ ಆವರಿಸಿಕೊಂಡಿದೆ. ಇದೊಂದು ಖಾಸಗಿ ಸ್ಲೀಪರ್ ಕೋಚ್ ಬಸ್ ಆಅಗಿದ್ದು, ನಿದ್ದೆಯಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ದಾವಣಗೆರೆ: ಮತ್ತೆ 57 ಸಾವಿರ ಗಡಿದಾಟಿದ ಅಡಿಕೆ ದರ | ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ದಾಟಿ ಎದುರು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣವಾಗಿದೆ.
ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಹೇಳಾಗಿದೆ. ಬಸ್ ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ದಾವಣಗೆರೆ: ಹಿಂದೂ ಸಂಪ್ರದಾಯದಂತೆ ಚಳ್ಳಕೆರೆ ಮೂಲದ ವೈದ್ಯೆ ವಿವಾಹವಾದ ನ್ಯೂಜಿಲೆಂಡ್‌ನ ಟೆಕ್ಕಿ



