Connect with us

Dvgsuddi Kannada | online news portal | Kannada news online

ಚಿತ್ರದುರ್ಗ: 51 ಜನರಿಗೆ ಕೋವಿಡ್ ಸೋಂಕು ದೃಢ, 13,109ಕ್ಕೆ ಏರಿಕೆ

ಜಿಲ್ಲಾ ಸುದ್ದಿ

ಚಿತ್ರದುರ್ಗ: 51 ಜನರಿಗೆ ಕೋವಿಡ್ ಸೋಂಕು ದೃಢ, 13,109ಕ್ಕೆ ಏರಿಕೆ

ಚಿತ್ರದುರ್ಗ: ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರ ವರದಿಯಲ್ಲಿ 51 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,109ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 179 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 1912 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 51 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 13,109ಕ್ಕೆ ಏರಿಕೆಯಾಗಿದೆ. ಭಾನುವಾರ ಒಬ್ಬರು ಮೃತಪಟ್ಟಿದ್ದು ಇದುವರೆಗೆ ಒಟ್ಟು 64 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,698 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 346 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,04,961 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,38,690 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,124,163 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 921 ಜನರ ವರದಿ ಬರುವುದು ಬಾಕಿ ಇದೆ. 497 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top