Connect with us

Dvgsuddi Kannada | online news portal | Kannada news online

ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ಹಣ ಪತ್ತೆ…!

ಕ್ರೈಂ ಸುದ್ದಿ

ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ಹಣ ಪತ್ತೆ…!

ಚಿತ್ರದುರ್ಗ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಚಿತ್ರದುರ್ಗ‌‌ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಇದು ಅಡಕೆ ವರ್ತಕರೊಬ್ಬರಿಗೆ ಸೇರಿದ್ದು ಎನ್ನಲಾಗಿದೆ. ಆದರೆ, ಚಾಲಕನ ಬಳಿ ಸೂಕ್ತ ದಾಖಲೆ ಇಲ್ಲ.

ಈ ಬಗ್ಗೆ ಎಸ್​ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಸಚಿನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು. ಪತ್ತೆಯಾದ ಹಣದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ವಿಚಾರಣೆ ಬಳಿಕ ಖಚಿತ ಮಾಹಿತಿ ತಿಳಿಯಲಿದೆ. ಯಾರಿಗೆ ಸೇರಿದ ಹಣ, ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿಯಬೇಕಿದೆ. ಸುಮಾರು 8 ಕೋಟಿ ಹಣ ಜಪ್ತಿ ಮಾಡಲಾಗಿದೆ. ಹಣ ಎಣಿಕೆ ಕಾರ್ಯ ನಡೆಯುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top