ಚಿತ್ರದುರ್ಗ: ಚಿತ್ರದುರ್ಗದಿಂದ ದಾವಣಗೆರೆಗೆ ತೆರಳುವ ರಸ್ತೆಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ವಾರದದಲ್ಲಿ ಟೆಂಡರ್ ಕರೆಯುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ರೈಲ್ವೆ ನಿಲ್ದಾಣ ಬಳಿ ಇರುವ ರೈಲ್ವೆ ಗೇಟ್ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ರೈಲ್ವೆ ಗೇಟ್‌ನಿಂದ ಸಂಚಾರಕ್ಕೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸಂಸದ ಗೋವಿಂದ ಕಾರಜೋಳ ಮನವರಿಕೆ ಮಾಡಿಕೊಟ್ಟರು. ದಿನಕ್ಕೆ ಕನಿಷ್ಟ 30 ಬಾರಿ ರೈಲ್ವೆ ಗೇಟ್ ಬಂದ್ ಮಾಡುವುದರಿಂದ, ಹಲವು ಬಾರಿ
ರೈಲ್ವೆಯ ಉಪ ಮುಖ್ಯ ಇಂಜಿನಿಯರ್ ನಿಂಗಪ್ಪ ಅವರನ್ನು ರೈಲ್ವೆ ಸಚಿವ ವಿ. ಸೋಮಣ್ಣ ತೀವ್ರ ತರಾಟೆಗೆ ತೆಗೆದುಕೊಂಡು, ಈ ರೈಲ್ವೆ ಗೇಟ್‍ನ ಸಮಸ್ಯೆ ಪರಿಹರಿಸಲು ಈ ಹಿಂದೆಯೇ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಅನುದಾನ ಕೂಡ ಒದಗಿಸಲಾಗಿದೆ. ಆದರೆ ನೀವು ಯಾವುದೇ ಕ್ರಮ ಕೈಗೊಳ್ಳದೆ ಕಾಲಹರಣ ಮಾಡಿದ್ದೀರಿ. ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಬದ್ಧತೆ ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿ, ಒಂದು ವಾರದ ಒಳಗಾಗಿ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಬೇಕು, ತಪ್ಪಿದಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ , ಈ ಮಾರ್ಗದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಬಳಿಕ ನಗರದ ರೈಲ್ವೆ ನಿಲ್ದಾಣಕ್ಕೆ ಸಚಿವ ವಿ. ಸೋಮಣ್ಣ,ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದ ಕಾಮಗಾರಿ ಪರಿಶೀಲಿಸಿದರು.
ಸಂಸದ ಗೋವಿಂದ ಎಂ. ಕಾರಜೋಳ, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗದ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



