ಚಿತ್ರದುರ್ಗ: ಮೊದಲ ಹಂತದ ಗ್ರಾಪಂ ಚುನಾವಣೆ ಮುಗಿದಿದ್ದು, ತಾಲೂಕಿನ ೨೯ ಗ್ರಾಪಂ ಗಳಿಂದ ಒಟ್ಟು ೧೨೯೨ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಒಟ್ಟು ೪೯೬ ಸ್ಥಾನಗಳಲ್ಲಿ ೩೬ ಅಭ್ಯರ್ಥಿಗಳು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಗ್ರಾಪಂ ಸದಸ್ಯರಾಗಿದ್ದಾರೆ. ಉಳಿದ ೪೬೦ ಸ್ಥಾನಗಳಿಗೆ ಮತದಾನ ನಡೆದಿದ್ದು, ೧೨೯೨ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಡಿ. ೩೦ರಂದು ನಿರ್ಧಾರವಾಗಲಿದೆ. ತಾಲೂಕಿನಲ್ಲಿ ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಕನಿಷ್ಠ ಶೇ. ೭೧ ಹಾಗೂ ಗರಿಷ್ಠ ಶೇ. ೯೭ ಮತದಾನವಾಗಿದ್ದು, ಒಟ್ಟು ಶೇ.೮೮ರಿಂದ ಶೇ. ೯೦ರಷ್ಟು ಸರಾಸರಿ ಮತದಾನ ನಡೆದಿದೆ.
ಹೊಳಲ್ಕೆರೆ ತಾಲೂಕಿನಲ್ಲಿ ೩೬ ಅವಿರೋಧ ಆಯ್ಕೆ, ಡಿ. ೩೦ರಂದು ೧೨೯೨ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment