ಚಿತ್ರದುರ್ಗ: ರೋಡ್ ಡಿವೈಡರ್ಗೆ ಕಾರ್ ಡಿಕ್ಕಿಯಾಗಿದ ಪರಿಣಾಮ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಬಳಿ ನಡೆದಿದೆ.
ತಡರಾತ್ರಿ ರೋಡ್ ಡಿವೈಡರ್ಗೆ ಕಾರ್ ಡಿಕ್ಕಿಯಾಗಿದ್ದರಿಂದ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೃತರ ಗುರುತು ಇನ್ನೂ ಪತ್ತೆ ಆಗಿಲ್ಲ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



