ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ವಿರುದ್ಧ ಲೈಂಗಿಕ ದೌರ್ಜನ್ಯ ಗಂಭೀರ ಆರೋಪದ ಬೆನ್ನಲ್ಲೇ ಇದೀಗ ಮಾಜಿ ಶಾಸಕ, ಮುರುಘಾಮಠದ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ವಿರುದ್ಧವೂ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ.
ಮುರುಘಾಮಠದ ಮಹಿಳಾ ಹಾಸ್ಟೆಲ್ ವಾರ್ಡನ್, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಎ1 ಎಸ್.ಕೆ. ಬಸವರಾಜ, ಎ2 ಪತ್ನಿ ಸೌಭಗ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಮುರುಘಾ ಮಠದಲ್ಲಿ ಅವ್ಯವಹಾರ ನಡೆಸಿದ ಆರೋಪ ಮಾಜಿ ಶಾಸಕ ಬಸವರಾಜನ್ ಮೇಲಿದ್ದು, ಈಗಾಗಲೇ ಮಠದ ಆಡಳಿತಾಧಿಕಾರಿ ಸ್ಥಾನದಿಂದ ವಜಾ ಮಾಡಲಾಗಿತ್ತು.



