Connect with us

Dvgsuddi Kannada | online news portal | Kannada news online

ಮುರುಘಾ ಶ್ರೀಗಳಿಂದ ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ

ಪ್ರಮುಖ ಸುದ್ದಿ

ಮುರುಘಾ ಶ್ರೀಗಳಿಂದ ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ

ಚಿತ್ರದುರ್ಗ: ಮುರುಘಾ ಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದ ವೇಳೆ ಅವರು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಂದ ಲಿಂಗಧೀಕ್ಷೆ ನೀಡಿದರು.

ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರಿಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಧ್ಯಾನ ಮಾಡಿದರು. ಆಗ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಇಷ್ಟ ಲಿಂಗ ಬಗ್ಗೆ ಮಾಹಿತಿ ಕೇಳಿದರು. ಅವರು ಲಿಂಗ ಪೂಜೆ ಮಹತ್ವ ಬಗ್ಗೆ ವಿವರಿಸಿದರು. ಆಗ ರಾಹುಲ್ ಗಾಂಧಿ ನಾವು ಕೂಡ ಲಿಂಗ ದೀಕ್ಷೆ ಪಡೆದುಕೊಳ್ಳುವುದಾಗಿ ಹೇಳಿದರು.

ನಂತರ ಮುರುಘಾ ಶ್ರೀಗಳು ಲಿಂಗ ದೀಕ್ಷೆ ನೀಡಿದರು. ನಮಗೆ ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು.  ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top