ಚಿತ್ರದುರ್ಗ: ಟಯರ್ ಪಂಕ್ಚರ್ ಆಗಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಶಿವರಾಮ್ (45) ಹಾಗೂ ಚೇತನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗಾಯಳು ಸ್ವಾಮಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗಿನ ಜಾವ 5 ಗಂಟೆ ಈ ಘಟನೆ ನಡೆದಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸೀಬಾರ ಬಳಿ ೀ ಘಟನೆ ನಡೆದಿದೆ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯ ಟಯರ್ ಪಂಕ್ಚರ್ ಆಗಿತ್ತಿ. ಹೀಗಾಗಿ ನಿಧಾನವಾಗಿ ಚಲಿಸುತ್ತಿತ್ತು. ಈ ವೇಳೆ ದಾವಣಗೆರೆ ಕಡೆಯಿಂದ ವೇಗವಾಗಿ ಬಂದ ಇನ್ನೋವಾ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ. ಮೂರು ಗೋವಾಕ್ಕೆ ಹೋಗಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.