ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ, ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಕತ್ರಾಳ್ ಕೆರೆ ಬಳಿ ನಡೆದಿದೆ.
ಮುತ್ತುಸ್ವಾಮಿ (69) ಹಾಗೂ ಪಾಂಡುರಂಗ (32) ಮೃತ ದುರ್ದೈವಿಗಳು.ಕಾರಿನಲ್ಲಿದ್ದ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕತ್ರಾಳ್ ಕೆರೆ ಬಳಿ ಇದ್ದಕ್ಕಿದ್ದಂತೆ ಕಾರಿನ ಟೈರ್ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.