ಡಿವಿಜಿ ಸುದ್ದಿ, ಚಿತ್ರದುರ್ಗ: ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ಮುರುಘಾಶ್ರೀ ಪ್ರಶಸ್ತಿಗೆ ಹಿರಿಯ ನಟ ಮುಖ್ಯಂತ್ರಿ ಚಂದ್ರು ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಮೂರ್ತಿ ಮುರುಘಾ ಶರಣರು, ರಂಗಭೂಮಿ, ಸಿನಿಮಾ ಕ್ಷೇತ್ರದಿಂದ ನಟ ಮುಖ್ಯಮಂತ್ರಿ ಚಂದ್ರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್ ಹಾಗೂ ಧರ್ಮದರ್ಶಿ ಎಸ್.ಷಣ್ಮುಖಪ್ಪ ಅವರು ಮುರುಘಾಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಹರಿಯಾಣದ ಜಾಹ್ನವಿ ಪನ್ವಾರ್ ಅವರನ್ನು ಆಯ್ಕೆ ಮಾಡಲಾಗಿದೆ ಮುರುಘಾಶ್ರೀ ಹಾಗೂ ಭರಮಣ್ಣನಾಯಕ ಶೌರ್ಯ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಅ.24ರಂದು ಪ್ರಶಸ್ತಿ ಪ್ರದಾನ ಮಾಡುಲಾಗುವುದು ಎಂದರು.



