Connect with us

Dvgsuddi Kannada | online news portal | Kannada news online

ಜುಲೈ16 ರಂದು ಯಶ್ ಅಭಿಯಾನದ ಕೆಜಿಎಫ್ 2 ರಿಲೀಸ್

ಪ್ರಮುಖ ಸುದ್ದಿ

ಜುಲೈ16 ರಂದು ಯಶ್ ಅಭಿಯಾನದ ಕೆಜಿಎಫ್ 2 ರಿಲೀಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ನಿರೀಕ್ಷೆಯ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಜುಲೈ 16 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಡೀ ದೇಶದ ಗಮನ ಸೆಳೆದ, ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿರುವ ‘ಕೆಜಿಎಫ್ ಚಾಪ್ಟರ್ 2’ ಜುಲೈ 16 ರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಮಾಹಿತಿ ನೀಡಿದ್ದಾರೆ.

ಹೊಂಬಾಳೆ ಫಿಲಂಸ್ ನ ವಿಜಯ ಕಿರಗಂದೂರು ನಿರ್ಮಾಣ ಮಾಡಿರುವ ಚಿತ್ರದಲ್ಲಿ ಯಶ್, ಸಂಜಯ್ ದತ್, ಪ್ರಕಾಶ್ ರಾಜ್, ರವೀನಾ ಟಂಡನ್ ಸೇರಿದಂತೆ ಬಹುದೊಡ್ಡ ತಾರಾಬಳಗವೇ ಇದೆ.

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ನಿರ್ಮಾಣವಾಗಿರುವ ಚಿತ್ರದ ಟೀಸರ್ ಬಿಡುಗಡೆಯಾಗಿ ದಾಖಲೆ ಬರೆದಿದೆ. ಈಗ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದ್ದು ಅಭಿಮಾನಿಗಳ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top