ದಾವಣಗೆರೆ: 545 ಸಬ್ ಇನ್ ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ತನಿಖೆ ಮಾಡಲಾಗುವುದು. ಯಾವುದೇ ಪಕ್ಷದವರಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದ 545 ಸಬ್ ಇನ್‌ಸ್ಪೆಕ್ಟರ್ ಅಕ್ರಮ ನೇಮಕಾತಿ ಪ್ರಕಣರವನ್ನು ಸಿಐಡಿಗೆ ವಹಿಸಲಾಗಿದ್ದು, ಆರೋಪಿಗಳನ್ನು ಶ್ರೀಘವೇ ಪತ್ತೆ ಹಚ್ಚಲಾಗುವುದು. ಪರೀಕ್ಷಾ ಕೇಂದ್ರ, ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಸೂಪರ್‌ವೈಸರ್‌ಗಳನ್ನು ಪತ್ತೆ ಹಚ್ಚಿ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುವುದು. ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಏನಿದೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಚನ್ನಪ್ಪ, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ, ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಎಸ್ಪಿ ಸಿ.ಬಿ.ರಿಷ್ಯಂತ್ ಉಪಸ್ಥಿತರಿದ್ದರು.



