ಬೆಂಗಳೂರು : ನಿನ್ನೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ವಿರುದ್ಧ, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಯತ್ನ ಪ್ರಕರಣದ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಕಳೆದ ನಿನ್ನೆ ಸಂಜೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಭೇಟಿ ಮಾಡಿ ಅವರ ಕುಟುಂಬಸ್ಥ ಸಾಂತ್ವನ ಹೇಳಿದ್ದರು.
ಆಸ್ಪತ್ರೆಗೆ ಭೇಟಿ ನೀಡಿದ ಸದಾಶಿವನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್, ಆತ್ಮಹತ್ಯೆಗೆ ಯತ್ನಿಸಿದ ಸಂಬಂಧ ತನಿಖೆ ನಡೆಸಲು, ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆತ್ಮಹತ್ಯೆ ಯತ್ನ ಪ್ರಕರಣದ ಅಡಿಯಲ್ಲಿ ಅವರ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



