Connect with us

Dvgsuddi Kannada | online news portal | Kannada news online

ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಿಎಂ ಕಿಡಿ

ಪ್ರಮುಖ ಸುದ್ದಿ

ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಸಾಲ ನೀಡಲು ಬ್ಯಾಂಕ್ ಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಿಡಿಮಿಡಿ ಸಿಎಂ ಯಡಿಯೂರಪ್ಪ, ಬಡವರಿಗಾಗಿ ಜಾರಿಗೊಳಿಸಿರುವ ಈ ಯೋಜನೆಗಳ ಅನುಷ್ಠಾನಕ್ಕೆ ಬ್ಯಾಂಕಗಳು ಆದ್ಯತೆ ನೀಡುತ್ತಿಲ್ಲ ಎಂಬ ದೂರು ಕೇಳಿಬರುತ್ತಿವೆ.  ಎರಡೂ ಯೋಜನೆಗಳ ಪ್ರಗತಿ ರಾಜ್ಯದಲ್ಲಿ ಕುಂಠಿತವಾಗಿದ್ದು, ಸಾಲ ನೀಡುವುದರಲ್ಲಿಯೂ ಕರ್ನಾಟಕ 5ನೇ ಸ್ಥಾನದಲ್ಲಿದೆ. ಬ್ಯಾಂಕ್ ಅಧಿಕಾರಿಗಳ ಈ ವರ್ತನೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸಿ, ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top